ಬೆಂಗಳೂರು : ಬೆಂಗಳೂರಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರ ಗಾಯವಾಗಿದ್ದು, ಆಘಾತಕಾರಿ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕಾಲೇಜು ಬಸ್ ಹಿಡಿಯಲು ಅವಸರವಾಗಿ ಓಡಿಹೋದ ಬಾಲಕನಿಗೆ ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದಿದೆ . ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರಿನಲ್ಲಿ ತನ್ನ ಕಾಲೇಜು ವ್ಯಾನ್ ಹಿಡಿಯಲು ರಸ್ತೆ ದಾಟಲು ಪ್ರಯತ್ನಿಸುತ್ತಿದ್ದ 17 ವರ್ಷದ ಬಾಲಕನಿಗೆ ಬಸ್ ಡಿಕ್ಕಿ ಹೊಡೆದ ನಂತರ ಗಾಯಗೊಂಡಿದ್ದಾನೆ. ಈ ಘಟನೆ ಬುಧವಾರ ಬೆಳಿಗ್ಗೆ 6:30 ರ ಸುಮಾರಿಗೆ ಸಂಭವಿಸಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. 25 ಸೆಕೆಂಡುಗಳ ಕ್ಲಿಪ್ನಲ್ಲಿ 12 ನೇ ತರಗತಿಯ ವಿದ್ಯಾರ್ಥಿಯು ಕಾಲೇಜು ವ್ಯಾನ್ ನೋಡಿ ರಸ್ತೆ ಕಡೆ ನೋಡದೇ ಓಡಲು ಪ್ರಾರಂಭಿಸಿದನು. ನಂತರ ಅವನಿಗೆ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಬಸ್ ಡಿಕ್ಕಿ ಹೊಡೆದಿದೆ. ಸದ್ಯ, ಬಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
You Might Also Like
TAGGED:BMTC