ಮಂಡ್ಯ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಪಾತ್ರೆ ತೊಳೆಯುತ್ತಿದ್ದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಳೆಹೊನ್ನಗ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 45 ವರ್ಷದ ಶೀಲಾ ಮೃತ ಮಹಿಳೆ. ಮನೆಯಲ್ಲಿ ಪಾತ್ರೆ ತೊಳೆಯುತ್ತಿದ್ದ ಮಹಿಳೆ ಹಠಾತ್ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.