ಬೆಂಗಳೂರು: ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆ ದಿಢೀರ್ ಮುಂದೂಡಿಕೆಯಾಗಿದೆ.
ಸಚಿವರುಗಳು ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿರುವ ಕಾರಣ ಸಚಿವರುಗಳಿಲ್ಲದೇ ಸಭೆ ನಡೆಸುವುದು ಸರಿಯಲ್ಲ. ಹೀಗಾಗಿ ಇಂದು ಸಂಜೆ ನಿಗದಿಯಾಗಿದ್ದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.