HomeLatest NewsBREAKING: ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್ ಫೋಟೋ ಇಡಲು ಮರೆತಿದ್ದ ಅಧಿಕಾರಿ 7 ತಿಂಗಳ ನಂತರ ಅಮಾನತು

BREAKING: ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್ ಫೋಟೋ ಇಡಲು ಮರೆತಿದ್ದ ಅಧಿಕಾರಿ 7 ತಿಂಗಳ ನಂತರ ಅಮಾನತು

ಬೆಂಗಳೂರು: ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್ ಭಾವಚಿತ್ರ ಇಡುವುದನ್ನು ಮರೆತಿದ್ದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ವಿಧಾನ ಪರಿಷತ್ ಉಪ ಕಾರ್ಯದರ್ಶಿ ಕೆ.ಜಿ. ಜಲಜಾಕ್ಷಿ ಅವರನ್ನು ಅಮಾನತು ಮಾಡಲಾಗಿದೆ. ನವೆಂಬರ್ 26ರಂದು ಬ್ಯಾಂಕ್ವೆಟ್ ಹಾಲ್ ನಲ್ಲಿ ಸಂವಿಧಾನ ಪೀಠಿಕೆ ಬೋಧನೆ ಮಾಡಲಾಗಿತ್ತು. ಸಂವಿಧಾನ ದಿನಾಚರಣೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಮರೆತಿದ್ದರು.

ಘಟನೆ ನಡೆದ 7 ತಿಂಗಳ ನಂತರ ವಿಧಾನ ಪರಿಷತ್ ಉಪ ಕಾರ್ಯದರ್ಶಿ ಜಲಜಾಕ್ಷಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕಾರ್ಯಕ್ರಮ ಆರಂಭಕ್ಕೆ ಮುನ್ನ ನೆನಪಿಸಿದ್ದರೂ ಭಾವಚಿತ್ರ ಇಡಲು ಕಡೆಗಣಿಸಿದ ಆರೋಪ ಕೇಳಿ ಬಂದಿತ್ತು. ಅಂಬೇಡ್ಕರ್ ಗೆ ಅವಮಾನಿಸಲಾಗಿದೆ ಎಂದು ದಲಿತ ಸಂಘಟನೆಗಳಿಂದ ದೂರು ನೀಡಲಾಗಿತ್ತು. ಅಲ್ಲದೇ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆಗಳು ಒತ್ತಾಯಿಸಿದ್ದವು. ಇಲಾಖಾ ವಿಚಾರಣೆಯ ನಂತರ ಪರಿಷತ್ ಉಪ ಕಾರ್ಯದರ್ಶಿ ಜಲಜಾಕ್ಷಿ ಅವರನ್ನು ಅಮಾನತು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular