ಕಲಬುರಗಿ: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಆರ್.ಎಸ್.ಎಸ್. ನಿಷೇಧಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಆರ್.ಎಸ್.ಎಸ್. ದೇಶದ್ರೋಹಿ ಸಂಘಟನೆಯಾಗಿದ್ದು, ಮೂರು ಬಾರಿ ನಿಷೇಧಕ್ಕೆ ಒಳಗಾಗಿದೆ. ಅದರ ಮೇಲಿನ ನಿಷೇಧ ತೆಗೆದಿರುವುದೇ ದೊಡ್ಡ ತಪ್ಪಾಗಿದೆ. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಖಂಡಿತವಾಗಿಯೂ ಆರ್.ಎಸ್.ಎಸ್.ಗೆ ನಿಷೇಧ ಹೇರುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವ ಸಂಘಟನೆ ಜಾತಿ, ಕೋಮು ಭಾವನೆಯನ್ನು ಪ್ರಚೋದಿಸುವುದೋ ಅದು ದೇಶದ್ರೋಹಿ ಸಂಘಟನೆ ಎಂದು ಅಂಬೇಡ್ಕರ್ ಹೇಳಿದ್ದಾರೆ. ಆರ್.ಎಸ್.ಎಸ್. ಕಳೆದ 100 ವರ್ಷದಿಂದ ಕೋಮಭಾವನೆ ಕೆರಳಿಸುವ ಕೆಲಸ ಮಾಡುತ್ತಿದೆ. ಈಗಾಗಲೇ ಮೂರು ಬಾರಿ ನಿಷೇಧ ಹೇರಲ್ಪಟ್ಟಿದ್ದ ಸಂಘಟನೆಯನ್ನು ಮತ್ತೆ ನಿಷೇಧಿಸಬೇಕು. ಅದರ ಮೇಲಿನ ನಿಷೇಧ ತೆಗೆದಿದ್ದೇ ದೊಡ್ಡ ತಪ್ಪಾಗಿದೆ. ನಾವು ಅಧಿಕಾರಕ್ಕೆ ಬಂದರೆ ಆರ್.ಎಸ್.ಎಸ್. ನಿಷೇಧಿಸುತ್ತೇವೆ ಎಂದು ಹೇಳಿದ್ದಾರೆ.