HomeLatest Newsಇಂದಿನಿಂದ ಜುಲೈ 7 ರವರೆಗೆ ಮದ್ಯ ಮಾರಾಟ ನಿಷೇಧ: ಮೊಹರಂ ಹಬ್ಬ ಆಚರಣೆ ಹಿನ್ನೆಲೆ ಆದೇಶ

ಇಂದಿನಿಂದ ಜುಲೈ 7 ರವರೆಗೆ ಮದ್ಯ ಮಾರಾಟ ನಿಷೇಧ: ಮೊಹರಂ ಹಬ್ಬ ಆಚರಣೆ ಹಿನ್ನೆಲೆ ಆದೇಶ

ಕೊಪ್ಪಳ: ಮೊಹರಂ ಹಬ್ಬದ ಆಚರಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜುಲೈ 5 ರಿಂದ 7 ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸುರೇಶ್ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಮೊಹರಂ ಹಬ್ಬದ ಆಚರಣೆಯ ಪ್ರಯುಕ್ತ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರನ್ವಯ ಜಿಲ್ಲೆಯಾದ್ಯಂತ ಜುಲೈ 5 ರ ಬೆಳಿಗ್ಗೆ 6 ಗಂಟೆಯಿಂದ ಜು.7 ರ ರಾತ್ರಿ 11 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆ ತರಲು ನಿರ್ಲಕ್ಷ್ಯ ತೋರಿಸಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular