HomeLatest NewsBREAKING: ವೇಶ್ಯಾವಾಟಿಕೆ ನಡೆಸುತ್ತಿದ್ದ ರೆಸಿಡೆನ್ಸಿ ಮೇಲೆ ದಾಳಿ: ಹೊರ ರಾಜ್ಯ, ವಿದೇಶಿ ಮಹಿಳೆಯರ ರಕ್ಷಣೆ: ರೂಂನಲ್ಲಿ...

BREAKING: ವೇಶ್ಯಾವಾಟಿಕೆ ನಡೆಸುತ್ತಿದ್ದ ರೆಸಿಡೆನ್ಸಿ ಮೇಲೆ ದಾಳಿ: ಹೊರ ರಾಜ್ಯ, ವಿದೇಶಿ ಮಹಿಳೆಯರ ರಕ್ಷಣೆ: ರೂಂನಲ್ಲಿ ಅಡಗುತಾಣ, ತಮಿಳುನಾಡು ಕಾಂಡೊಮ್ ಪತ್ತೆ

ಹುಬ್ಬಳ್ಳಿ: ಮೈಸೂರಿನ ಒಡನಾಡಿ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಹುಬ್ಬಳ್ಳಿ ಪೊಲೀಸರು ಹೊಸೂರಿನ  ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಪಶ್ಚಿಮ ಬಂಗಾಳದ ಮಹಿಳೆ ಹಾಗೂ ನಾಲ್ವರು ವಿದೇಶಿ ಮಹಿಳೆಯರನ್ನು ರಕ್ಷಿಸಲಾಗಿದೆ. ದಾಳಿಯ ವೇಳೆ ಹೋಟೆಲ್ ವ್ಯವಸ್ಥಾಪಕ, ಸಿಬ್ಬಂದಿ ಹಾಗೂ ಗ್ರಾಹಕ ಸೇರಿ 7 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ರೆಸಿಡೆನ್ಸಿಯ ಎರಡನೇ ಮಹಡಿಯ ರೂಮ್ ಗಳಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ದಾಳಿ ನಡೆದಾಗ ತಪ್ಪಿಸಿಕೊಳ್ಳಲು ಶೌಚಾಲಯದ ಒಳಗಿದ್ದ ಅಡಗುತಾಣ ಪತ್ತೆಯಾಗಿದೆ. ದಾಳಿ ಸಂದರ್ಭದಲ್ಲಿ ಗ್ರಾಹಕನೊಬ್ಬ ಅದರಲ್ಲಿ ಬಚ್ಚಿಟ್ಟುಕೊಂಡಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಡನಾಡಿ ಸಂಸ್ಥೆ ಸಂಸ್ಥಾಪಕ ಸ್ಟ್ಯಾನ್ಸಿ ಅವರಿಗೆ ಬಂದ ಮಾಹಿತಿ ಮೇರೆಗೆ ಪೊಲೀಸರ ಸಹಯೋಗದಲ್ಲಿ ದಾಳಿ ನಡೆಸಲಾಗಿದೆ. ದಾಳಿಯ ಸಂದರ್ಭದಲ್ಲಿ ತಮಿಳುನಾಡು ಆರೋಗ್ಯ ಇಲಾಖೆಯಿಂದ ವಿತರಿಸುವ ಸಾವಿರಾರು ಕಾಂಡೊಮ್ ಗಳು ಕಂಡು ಬಂದಿದೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular