ಲಖನೌ: ಮದರಸಾದಲ್ಲಿ ವಿದ್ಯಾರ್ಥಿನಿ ಮೇಲೆ ಧರ್ಮಗುರುವೇ ಅತ್ಯಾಚಾರವೆಸಗಿ, ಗರ್ಭಪಾತಕ್ಕೆ ಒತ್ತಾಯಿಸಿರುವ ಹೇಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಮೀರತ್ ನ ಮದರಸಾವೊಂದರಲ್ಲಿ 22 ವರ್ಷದ ವಿದ್ಯಾರ್ಥಿನಿಯ ಮೇಲೆ ಧರ್ಮಗುರು ಅತ್ಯಾಚಾರವೆಸಗಿ, ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾನೆ. ಪ್ರಕರಣ ಸಂಬಂಧ ಧರ್ಮಗುರುವನ್ನು ಬಂಧಿಸಲಾಗಿದೆ.
ಬಿಹಾರ ಮೂಲದ ಸಂತ್ರಸ್ತೆ, ಮದರಾಸಾ ಧರ್ಮಗುರು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ತಾನು ಗರ್ಭಿಣಿಯಾದಾಗ ಗರ್ಭಪಾತ ಮಾಡಿಸಿಕೊಳ್ಲುವಂತೆ ಒತ್ತಾಯಿಸಿದ್ದಾನೆ. ಅಲ್ಲದೇ ಧರ್ಮಗುರುವಿನ ಕೃತ್ಯಕ್ಕೆ ಆತನ ಪತ್ನಿಯೂ ಕುಮ್ಮಕ್ಕು ನೀಡಿದ್ದಾಳೆ. ಅಲ್ಲದೇ ತನಗೆ ಹಲವು ಬಾರಿ ಬೆದರಿಕೆಯೊಡ್ಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾಳೆ.
ವಿದ್ಯಾರ್ಥಿನಿ ಮೂರು ವರ್ಷಗಳ ಹಿಂದೆ ಸೆಮಿನರಿಗೆ ಬಂದಿದ್ದಳು. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಧರ್ಮಗುರು ಸೇರಿದಂತೆ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ಮೀರತ್ ನಗರ ಎಸ್ ಪಿ ಆಯುಷ್ ವಿಕ್ರಂ ತಿಳಿಸಿದ್ದಾರೆ.