ಹುಬ್ಬಳ್ಳಿ: ವಿವಿಧೆಡೆ ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಲವೆಡೆ ಮನೆಗಳ ಬೀಗ ಮುರಿದು ಚಿನ್ನಾಭರಣ, ಹಣ ಕದ್ದು ಕಳ್ಳರು ಪರಾರಿಯಾಗಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ತಾರಿಹಾಳ ಗ್ರಾಮದ ಸೈದುಸಾಬ್ ನದಾಫ್, ಅಂಚಗೇರಿ ಗ್ರಾಮದ ಮಂಜುನಾಥ್ ಜಗಲಾರ ಸೇರಿದಂತೆ ಹಲವರ ಮನೆಯಲ್ಲಿ ಕಳ್ಳತನ ನಡೆದಿತ್ತು.
ಇನ್ಸ್ ಪೆಕ್ಟರ್ ಮುರುಗೇಶ್ ಚನ್ನಣ್ಣವರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಗುಡಗೇರಿ ಗ್ರಾಮದ ಶ್ರೀಧರ್, ಹೇಮಂತ ಧರೆಣ್ಣವರ್, ಗೆಬಿ ಫರ್ನಾಂಡೀಸ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 9 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.