HomeLive NewsBIG NEWS : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ...

BIG NEWS : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 7 ಮತ್ತು 8ನೇ ತರಗತಿಯಲ್ಲಿ ಖಾಲಿ ಇರುವ ಅಲ್ಪಸಂಖ್ಯಾತರ ಸೀಟುಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಸಂಬಂಧಪಟ್ಟ ವಸತಿ ಶಾಲೆಗಳಲ್ಲಿ ಮತ್ತು ಜಿಲ್ಲಾ ಕಚೇರಿಯಲ್ಲಿ ಜುಲೈ 14 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಡಾ.ಎ.ಪಿ.ಜೆಅಬ್ದುಲ್ ಕಲಾಂ ವಸತಿ ಶಾಲೆ, ಕೊಂಡಜ್ಜಿ, ಹರಿಹರ ತಾ|| ದಾವಣಗೆರೆ ಜಿಲ್ಲೆ ದೂ.ಸಂ: 9008815296, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ಬಾಲಕಿಯರ ವಸತಿ ಶಾಲೆ, ವಡೆರಹಳ್ಳಿ, 9916828601, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ ದೂ.ಸಂ: 9164855466, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಜಗಳೂರು ತಾ|| ದೂ.ಸಂ: 8197641112

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-250022 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular