BIG NEWS: ವರುಣಾರ್ಭಟಕ್ಕೆ ಮತ್ತೊಂದು ಅವಾಂತರ: ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತ

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಭೂಕುಸಿತ, ಗುಡ್ದ ಕುಸಿತ ಸಂಭವಿಸಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ ಬಳಿ ಈ ಘಟನೆ ನಡೆದಿದೆ.

ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ರಸ್ತೆ ಮಾರ್ಗದಲ್ಲಿಯೂ ಬಿರುಕುವುಂಟಾಗಿದೆ. ನಿಧಾನಗತಿಯಲ್ಲಿ ವಾಹನಗಳು ತೆರಳಲು ಅನುವು ಮಾಡಿಕೊಡಲಾಗಿದೆ. ವಾಹನ ಸವಾರರು ಈ ಭಾಗದಲ್ಲಿ ಆತಂಕದಲ್ಲಿಯೇ ಸಂಚರಿಸುವ ಸ್ಥಿತಿ ಎದುರಾಗಿದೆ.

ಕರ್ನಾಟಕ ಹಾಗೂ ಗೋವಾ ಪೊಲೀಸರು ಸ್ಥಳಕ್ಕೆ ಭೇತಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read