ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್: ಗೃಹಲಕ್ಷ್ಮಿ ಸಂಘಗಳ ರಚನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ

ಬೀದರ್: 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರಗಿ ವಿಭಾಗ ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಈ ವಿಷಯ ತಿಳಿಸಿದ್ದಾರೆ. ‌ಈ ವರ್ಷ ಅಂಗನವಾಡಿ ಆರಂಭವಾಗಿ 50 ವರ್ಷ ತುಂಬುತ್ತಿದ್ದು, ಅಕ್ಟೋಬರ್‌ ನಲ್ಲಿ ಸುವರ್ಣ ಮಹೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಸಂಘಗಳ ಘೋಷಣೆ ಮಾಡಿ ಇನ್ನಷ್ಟು ಬಲ ತುಂಬಲಾಗುವುದು ಎಂದರು.

ಬಾಲ್ಯ ವಿವಾಹವನ್ನು ತಡೆಯಲು ಅಧಿಕಾರಿಗಳು ವಿಶೇಷ ಕ್ರಮಕೈಗೊಳ್ಳಬೇಕು, ಸ್ವತಃ ಕರೆ ಮಾಡಿ ತನ್ನ ವಿವಾಹವನ್ನು ತಪ್ಪಿಸುವಂತೆ ಅಧಿಕಾರಿಗಳನ್ನು ಕೋರಿದ್ದ ಜಿಲ್ಲೆಯ ಬಾಲಕಿಯನ್ನು ಕರೆಸಿ ಸನ್ಮಾನಿಸಬೇಕು, ಜೊತೆಗೆ ಆರ್ಥಿಕ ಸಹಾಯ ಮಾಡಬೇಕು. ಇದರಿಂದ ಬೇರೆಯವರಿಗೂ‌ ಕೂಡ ಸಹಾಯವಾಗುತ್ತದೆ ಎಂದರು. ಎಲ್ಲಾ ಇಲಾಖೆಗಳು ಕೈಜೋಡಿಸಿದಾಗ ಅನಿಷ್ಟ ಪದ್ಧತಿಗಳನ್ನು ತಡೆಯಲು ಸಾಧ್ಯ. ಜಾಗೃತಿ ಮೂಡಿಸುವುದರ ಜೊತೆಗೆ ಕಠಿಣ ಕ್ರಮದ ಮೂಲಕ ಭಯ ಹುಟ್ಟಿಸಿದರೆ ಅನಿಷ್ಟ ಪದ್ಧತಿ ನಿಲ್ಲಲು ಸಾಧ್ಯ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read