HomeLatest Newsಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಇರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 10ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಜುಲೈ 6 ಮತ್ತು 7ರಂದು ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ಬಹುತೇಕ ಭಾಗದಲ್ಲಿ ಮತ್ತು ಒಳನಾಡಿನ ಕೆಲವು ಕಡೆ ಶನಿವಾರ ಹೆಚ್ಚಿನ ಮಳೆಯಾಗಿದೆ.

ಜುಲೈ 10ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular