ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಿಡಿಗೇಡಿಗಳು ಹಿಂದೂ ದೇವರಿಗೆ ಅವಮಾನ ಮಾಡಿರುವ ಘಟನೆ ನಡೆದಿದೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಶಿವಮೊಗ್ಗದ ರಾಗಿಗುಡ್ದದ ಬಂಗಾರಪ್ಪ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪೀಗಳನ್ನು ಬಂಧಿಸಲಾಗಿದೆ. ವಿಡಿಯೋ ಆಧರಿಸಿ ಇಬ್ಬರನ್ನು ಬಂಧಿಸಿದ್ದೇವೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ನಾನೂ ಕೂಡ ಭೇಟಿ ನೀಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.