ತುಮಕೂರು: ಪಿಎಸ್ ಐ ಓರ್ವರು ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಪಿಎಸ್ ಐ ನಾಗರಾಜ್ (35) ಆತ್ಮಹತ್ಯೆಗೆ ಶರಣಾಗಿರುವ ಪಿಎಸ್ ಐ. ದಾವಣಗೆರೆ ನಗರದ ಬಡಾವಣೆ ಠಾಣೆಯ ಪಿಎಸ್ ಐ ನಾಗರಾಜ್, ತುಮಕೂರಿನ ದ್ವಾರಕ ಲಾಡ್ಜ್ ನ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾರೆ.
ಜುಲೈ 1ರಂದು ಲಾಡ್ಜ್ ನಲ್ಲಿ ರೂಂ ಬುಕ್ ಮಾಡಿದ್ದ ಪಿಎಸ್ ಐ ನಾಗರಾಜ್, ಬಳಿಕ ರೂಮಿನಿಂದ ಹೊರಬಂದಿಲ್ಲ ಎನ್ನಲಾಗಿದೆ. ಇಂದು ಬೆಳಿಗ್ಗೆ ಲಾಡ್ಜ್ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗಲೇ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.