HomeLatest Newsಸಂದೇಶ್ ಖಾಲಿ ಪ್ರಕರಣ: ಪ್ರಮುಖ ಆರೋಪಿ ವಿರುದ್ಧ FIR ದಾಖಲಿಸಿದ ಸಿಬಿಐ

ಸಂದೇಶ್ ಖಾಲಿ ಪ್ರಕರಣ: ಪ್ರಮುಖ ಆರೋಪಿ ವಿರುದ್ಧ FIR ದಾಖಲಿಸಿದ ಸಿಬಿಐ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ್ ಖಾಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು, ಮುಖ್ಯ ಆರೋಪಿ ತೃಣಮೂಲ ಕಾಂಗ್ರೆಸ್ ಮುಖಂಡ ಶಹಜಹಾನ್ ಶೇಖ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಶಹಜಹಾನ್ ಶೇಖ್ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಖಚಿತಪಡಿಸಿದ್ದಾರೆ. 2019ರ ಲೋಕಸಭಾ ಚುನಾವಣೆ ನಂತರ ಸಂದೇಶ್ ಖಾಲಿಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರಾದ ಪ್ರದೀಪ್ ಮೊಂಡಲ್, ದೇವದಾಸ್ ಮೊಂಡಲ್ ಮತ್ತು ಸುಕಾಂತ್ ಮೊಂಡಲ್ ಅವರನ್ನು ಹತ್ಯೆ ಮಾಡಲಾಗಿತ್ತು. ನಂತರ ನಡೆದ ಪ್ರತಿಭಟನೆಗಳು ಹಾಗೂ ಹಿಂಸಾಚಾರದಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular