ಹುಬ್ಬಳ್ಳಿ: ಹೃಹತ್ ವೇಶ್ಯಾವಾಟಿಕೆ ಜಾಲವನ್ನು ಪೊಲೀಸರು ಬೇಧಿಸಿದ್ದು, ಲಾಡ್ಜ್ ಮ್ಯಾನೇಜರ್, ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಮೈಸೂರಿನ ಒಡನಾಡಿ ಸಂಸ್ಥೆ ಸಹಯೋಗದೊಂದಿಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವು ಮಹಿಳೆಯರನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿಯ ವಿದ್ಯಾನಗರದ ಪಾರಿಜಾತ ರೆಸಿಡೆನ್ಸಿ ಲಾಡ್ಜ್ ನಲ್ಲಿ ಈ ದಂಧೆ ನಡೆಯುತ್ತಿತ್ತು. ಲಾಡ್ಜ್ ರೂಮಿನ ಶೌಚಾಲಯದಲ್ಲಿ ರಹಸ್ಯ ಕೋಣೆ ಇದ್ದು, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಯುವತಿಯರನ್ನು ರಹಸ್ಯ ಕೂಣೆ ಮೂಲಕ ಸುರಂಗ ಮಾರ್ಗದಲ್ಲಿ ಬೇರೆ ರೂಮುಗಳಿಗೆ ಸ್ಥಳಾಂತರಿಸಲಾಗುತ್ತಿತ್ತು. ಪೊಲೀಸರು ಲಾಡ್ಜ್ ಮೇಲೆ ದಾಳಿ ನಡೆಸಿ ಯುವತಿಯರನ್ನು ರಕ್ಷಿಸಿದ್ದಾರೆ. ಲಾಡ್ಜ್ ಮ್ಯಾನೇಜರ್, ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ದಾಳಿ ವೇಳೆ ಲಾಡ್ಜ್ ಮಾಲೀಕ ಪರಾರಿಯಾಗಿದ್ದಾನೆ.