ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಸರಣಿ ಮುಂದುವರೆದಿದೆ. ಚಾಮರಾಜನಗರದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
52 ವರ್ಷದ ಶಿವಕುಮಾರ್ ಮೃತ ದುರ್ದೈವಿ. ರಾಮಸಮುದ್ರ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಈ ದುರಂತ ಸಂಭವಿಸಿದೆ. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಶಿವಕುಮಾರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.