ಮಂಡ್ಯ: ನಿಯಂತ್ರಣ ತಪ್ಪಿ ಬೈಕ್ ವಿಸಿ ನಾಲೆಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದ ಬಳಿ ಬೈಕ್ ತಡೆಗೋಡೆಗೆ ಡಿಕ್ಕಿ ಹೊಡೆದು, ವಿಸಿ ನಾಲೆಗೆ ಉರುಳಿ ಬಿದ್ದಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
ತುಮಕೂರಿನ ರಾಮಣ್ಣ (70) ಹಾಗೂ ಮದ್ದೂರಿನ ಭರತ್ (19) ಮೃತ ದುರ್ದೈವಿಗಳು. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.