ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ಕಾಡುಕೋಣ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ರಮೇಶ್(52) ಮೃತಪಟ್ಟವರು. ಕಾಡುಕೋಣ ದಾಳಿಯಿಂದಾಗಿ ರಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಕಾಡುಕೋಣ ದಾಳಿ ಮಾಡಿದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ರಮೇಶ್ ಮೃತಪಟ್ಟಿದ್ದಾರೆ. ರಮೇಶ್ ಮೃತದೇಹವನ್ನು ಕಳಸ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಬಾಳೂರು ಠಾಣೆ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.