BREAKING: ಪಾಕಿಸ್ತಾನದಲ್ಲಿ ಕಟ್ಟಡ ಕುಸಿದು ಘೋರ ದುರಂತ: ಸಾವಿನ ಸಂಖ್ಯೆ 27ಕ್ಕೆ ಏರಿಕೆ

ಕರಾಚಿ: ಪಾಕಿಸ್ತಾನದ ದಕ್ಷಿಣ ಬಂದರು ನಗರ ಕರಾಚಿಯಲ್ಲಿ ಕಟ್ಟಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿದೆ. ರಕ್ಷಣಾ ಕಾರ್ಯಕರ್ತರು ಹೆಚ್ಚಿನ ಶವಗಳನ್ನು ಹೊರತೆಗೆದಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ರಕ್ಷಣಾ ಸಂಸ್ಥೆ ರೆಸ್ಕ್ಯೂ 1122 ರ ವಕ್ತಾರರು ಭಾನುವಾರ ತಿಳಿಸಿದ್ದಾರೆ.

ಸಾವಿನ ಸಂಖ್ಯೆಯನ್ನು ದೃಢಪಡಿಸಿದ ಕಾರ್ಯಾಚರಣೆಯ ವಕ್ತಾರ ಹಸಾನ್ ಉಲ್ ಹಸೀಬ್ ಖಾನ್, ರಕ್ಷಣಾ ಕಾರ್ಯಗಳು ಅಂತಿಮ ಹಂತದಲ್ಲಿವೆ ಮತ್ತು ಹೆಚ್ಚಿನ ಕಟ್ಟಡದ ಅವಶೇಷಗಳನ್ನು ತೆಗೆದುಹಾಕಲಾಗಿದೆ. ಬಲಿಯಾದವರಲ್ಲಿ ಕನಿಷ್ಠ 15 ಮಹಿಳೆಯರು ಮತ್ತು ಮೂವರು ಮಕ್ಕಳಿದ್ದಾರೆ. ಮೂವರು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

48 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಸಮಯದಲ್ಲಿ ಅವಶೇಷಗಳನ್ನು ತೆರವುಗೊಳಿಸಲು ಭಾರೀ ಯಂತ್ರೋಪಕರಣಗಳು ಮತ್ತು ಆಧುನಿಕ ಉಪಕರಣಗಳನ್ನು ಬಳಸಲಾಯಿತು. ಕುಸಿದ ಕಟ್ಟಡ 30 ವರ್ಷ ಹಳೆಯದಾಗಿದ್ದು, ಇದನ್ನು ಈ ಹಿಂದೆ ಅಸುರಕ್ಷಿತ ಎಂದು ಗುರುತಿಸಲಾಗಿತ್ತು. ಘಟನೆಯ ತನಿಖೆಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಾಕಿಸ್ತಾನದ ದಕ್ಷಿಣ ಬಂದರು ನಗರವಾದ ಕರಾಚಿಯ ಲಿಯಾರಿ ಪ್ರದೇಶದಲ್ಲಿ ಶುಕ್ರವಾರ ಐದು ಅಂತಸ್ತಿನ ವಸತಿ ಕಟ್ಟಡ ಕುಸಿದಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read