HomeLatest NewsBREAKING: 2 ಲಾರಿ, ಕಾರ್, 2 ಬೈಕ್ ಡಿಕ್ಕಿಯಾಗಿ ಸರಣಿ ಅಪಘಾತ: ಇಬ್ಬರು ಸಾವು, ಮತ್ತಿಬ್ಬರು...

BREAKING: 2 ಲಾರಿ, ಕಾರ್, 2 ಬೈಕ್ ಡಿಕ್ಕಿಯಾಗಿ ಸರಣಿ ಅಪಘಾತ: ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಬೆಳಗಾವಿ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಎರಡು ಲಾರಿ, ಕಾರ್ ಮತ್ತು ಎರಡು ಬೈಕುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಶಿವಪ್ಪ ಶಹಾಪುರ, ರಫೀಕ್ ಜಾಂಬೋಟಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರು –ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular