HomeLatest Newsಮುಸ್ಲಿಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ…!

ಮುಸ್ಲಿಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ…!

ಶಿವಮೊಗ್ಗ: ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿಯಾಗಿ ಮೊಹರಂ ಆಚರಣೆ ಮಾಡಲಾಗಿದೆ. ಬಂಜಾರ ಸಮುದಾಯದಿಂದ ಭಾವೈಕತೆಯ ಮೊಹರಂ ಆಚರಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ತಾಂಡಾದಲ್ಲಿ ಮುಸ್ಲಿಂಮರೇ ಇಲ್ಲ. ಈ ಊರಲ್ಲಿ ಶ್ರದ್ಧಾಭಕ್ತಿಯಿಂದ ಮೊಹರಂ ಆಚರಿಸಿರುವುದು ವಿಶೇಷವಾಗಿದೆ. ಒಂದೇ ಒಂದು ಮುಸ್ಲಿಂ ಮನೆ ಇಲ್ಲದಿದ್ದರೂ ಬಂಜಾರ ಸಮುದಾಯದವರು ಅದ್ದೂರಿಯಾಗಿ ಮೊಹರಂ ಆಚರಿಸಿ ಭಾವೈಕ್ಯತೆ ಮೆರೆದಿದ್ದಾರೆ.

ಶೀರಿಹಳ್ಳಿ ತಾಂಡಾದಲ್ಲಿ ಶ್ರದ್ಧಾಭಕ್ತಿಯಿಂದ ಮೊಹರಂ ಆಚರಿಸಲಾಗಿದೆ. ಮೂರು ದಿನಗಳ ಕಾಲ ಅಲೈದೇವರನ್ನ ಇಟ್ಟು ಪೂಜೆ ಮಾಡುವ ಬಂಜಾರರು ಮೂರನೇ ದಿನದಂದು ಅದ್ದೂರಿಯಾಗಿ ಮೆರವಣಿಗೆ ಮಾಡಿ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆರವಣಿಗೆ ವೇಳೆ ಬಂಜಾರ ಸಂಪ್ರದಾಯದಂತೆ ಹಾಡು, ಭಜನೆ ಮೂಲಕ ಮೊಹರಂ ಆಚರಿಸುವ ಮೂಲಕ ಭಾವೈಕತೆ ಸಾರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular