ಬೆಂಗಳೂರು: ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನ, ಮೊಹರು ಹೊಂದಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 6ರಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಸ್ವಾಯತ್ತ ಅಧಿಕಾರ ಹೊಂದಿದೆ. ಪಂಚಾಯಿತಿ ಶಾಶ್ವತ ಉತ್ತರಾಧಿಕಾರ ಹೊಂದಿರುವುದರಿಂದ ಪ್ರತ್ಯೇಕ ಲಾಂಛನ, ಮೊಹರು ಹೊಂದಲು ಅವಕಾಶ ನೀಡಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ತಮ್ಮ ಅಧಿಕೃತ ವಿಸಿಟಿಂಗ್ ಕಾರ್ಡ್ ಗಳ ಮೇಲೆ ತಮ್ಮ ಅಧಿಕಾರದ ಅವಧಿಯಲ್ಲಿ ಮಾತ್ರ ಬಳಸಬಹುದು. ಮಾಜಿ ಜನಪ್ರತಿನಿಧಿಗಳು, ನಿವೃತ್ತ ಅಧಿಕಾರಿಗಳು, ನೌಕರರಿಗೆ ಇನ್ನಿತರ ಸಂದರ್ಭದಲ್ಲಿ ಬಳಕೆಗೆ ಕೆಲವು ನಿರ್ಬಂಧ ಹೇರಲಾಗಿದೆ ಎಂದು ಹೇಳಿದ್ದಾರೆ.