HomeLatest NewsBIG NEWS: ಇನ್ನು ರಾಜ್ಯಾದ್ಯಂತ ಪ್ರತಿ ವರ್ಷ ಶಾಲಾ ಹಂತದಲ್ಲೇ ವಿದ್ಯಾರ್ಥಿಗಳ 'ಹೃದಯದ ಆರೋಗ್ಯ ತಪಾಸಣೆ'ಗೆ...

BIG NEWS: ಇನ್ನು ರಾಜ್ಯಾದ್ಯಂತ ಪ್ರತಿ ವರ್ಷ ಶಾಲಾ ಹಂತದಲ್ಲೇ ವಿದ್ಯಾರ್ಥಿಗಳ ‘ಹೃದಯದ ಆರೋಗ್ಯ ತಪಾಸಣೆ’ಗೆ ಸರ್ಕಾರ ನಿರ್ಧಾರ

ಚನ್ನರಾಯಪಟ್ಟಣ: ಪ್ರತಿವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲಿ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ಇದನ್ನು ವಿಸ್ತರಿಸಲಾಗುವುದು ಎಂದು ಸಹಕಾರ ಸಚಿವ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಹೃದಯಾಘಾತಕ್ಕೆ ಕಾರಣ ಮತ್ತು ಮುಂಜಾಗ್ರತೆ ಕ್ರಮಗಳ ಕುರಿತಾಗಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಂಡು ಜಾಗೃತಿ ಮೂಡಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಹೃದಯಾಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ. ಹಾಸನ ಜಿಲ್ಲೆಯಲ್ಲಿ ನಡೆದ ಹೃದಯಾಘಾತ ಸಾವಿನ ಪ್ರಕರಣಗಳ ತನಿಖೆ ಹಾಗೂ ಮಾಹಿತಿ ಪಡೆಯಲು ಹೃದ್ರೋಗ ತಜ್ಞರ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular