ಬಾಲ್ಯ ವಿವಾಹ ನಿಷೇಧ ಕಾಯ್ದೆಗೆ ಮತ್ತಷ್ಟು ಬಲ: ನಿಶ್ಚಿತಾರ್ಥ ಮಾಡುವವರ ವಿರುದ್ಧವೂ ಕ್ರಮ

ಬೆಂಗಳೂರು: ಬಾಲ್ಯ ವಿವಾಹ ಮಾಡಲು ಪ್ರಯತ್ನಿಸುವ ಮತ್ತು ಸಿದ್ಧತೆ ನಡೆಸುವ, ಚಿಕ್ಕ ವಯಸ್ಸಿನ ಬಾಲಕರು, ಬಾಲಕಿಯರ ನಡುವೆ ಮದುವೆ ಉದ್ದೇಶದಿಂದ ನಿಶ್ಚಿತಾರ್ಥ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಬಾಲ್ಯ ವಿವಾಹ ನಿಷೇಧ(ಕರ್ನಾಟಕ ತಿದ್ದುಪಡಿ) ಮಸೂದೆ -2025 ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಮುಂದಾಗಿದೆ. ಬಾಲ್ಯ ವಿವಾಹ ಮಾಡಲು ಯತ್ನಿಸಿದರೆ, ಸಿದ್ಧತೆ ನಡೆಸಿದರೆ ಅಥವಾ ಚಿಕ್ಕ ವಯಸ್ಸಿನ ಹುಡುಗ- ಹುಡುಗಿಯರಿಗೆ ನಿಶ್ಚಿತಾರ್ಥ ಮಾಡಿದಲ್ಲಿ ಎರಡು ವರ್ಷದವರೆಗೆ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ, ಒಂದು ಲಕ್ಷ ರೂಪಾಯಿವರೆಗೆ ವಿಸ್ತರಿಸಬಹುದಾದ ದಂಡ ವಿಧಿಸಬಹುದಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read