ಬೆಂಗಳೂರು : ರಾಜ್ಯದಲ್ಲಿ ಸರಣಿ ಹೃದಯಾಘಾತ ಮುಂದುವರೆದಿದ್ದು, ಹೃದಯಾಘಾತದಿಂದ ನಿನ್ನೆ ಒಂದೇ ದಿನ 8 ಮಂದಿ ಬಲಿಯಾಗಿದ್ದಾರೆ.
ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದರೆ. ಯಾದಗಿರಿ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಜಿಲ್ಲೆ ಜಿಲ್ಲೆಗಳಲ್ಲಿಯೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
* ಮೊಹರಂ ಆಚರಣೆ ಸಂದರ್ಭದಲ್ಲೇ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಯಾದಗಿರಿ ತಾಲೂಕಿನ ಶೆಟ್ಟಿಕೇರಾ ಗ್ರಾಮದಲ್ಲಿ ನಿನ್ನೆ ಈ ಘಟನೆ ನಡೆದಿದೆ. ಹಳ್ಳೆಪ್ಪ ಪೂಜಾರಿ ಮೃತ ದುರ್ದೈವಿ. ಮೊಹರಂ ಅಗ್ನಿಕುಂಡ ತುಳಿದ ಕೆಲವೇ ಗಂಟೆಗಳಲ್ಲಿ ಹೃಫ಼್ದಯಾಘಾತದಿಂದ ಹಳ್ಳೆಪ್ಪ ಕೊನೆಯುಸಿರೆಳೆದಿದ್ದಾರೆ.
* ಚಾಮರಾಜನಗರ: 52 ವರ್ಷದ ಶಿವಕುಮಾರ್ ಮೃತ ದುರ್ದೈವಿ. ರಾಮಸಮುದ್ರ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಈ ದುರಂತ ಸಂಭವಿಸಿದೆ. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಶಿವಕುಮಾರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಹಾಸನ: ಚಲಿಸುತ್ತಿದ್ದ ಕಾರಿನಲ್ಲಿಯೇ ಹೃದಯಾಘಾತಕ್ಕೀಡಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಡಿಸಿ ಕಚೇರಿ ಬಳಿ ನಡೆದಿದೆ.
* ಬೆಂಗಳೂರಿನ ನಿವಾಸಿ ರಂಗನಾಥ್ (52) ಮೃತ ದುರ್ದೈವಿ. ರಂಗನಾಥ್ ಪತ್ನಿ ಹಾಗೂ ಮಗಳ ಜೊತೆ ಮಂಗಳೂರಿಗೆ ಟ್ರಿಪ್ ಹೋಗಿದ್ದರು. ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದರು. ರಂಗನಾಥ್ ಅವರ ಪುತ್ರಿ ಕಾರು ಚಲಾಯಿಸುತ್ತಿದ್ದರು. ಹಾಸನದ ಜಿಲ್ಲಾಧಿಕಾರಿ ಕಚೇರಿ ಬಳಿ ಬರುತ್ತಿದ್ದಂತೆ ರಂಗನಾಥ್ ಅವರಿಗೆ ತೀವ್ರ ಎದೆನೋವು ಶುರುವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಇಸಿಜಿ ಮಾಡಿಸಲು ಸಿದ್ಧತೆ ನಡೆಸಲಾಗುತ್ತಿತ್ತು. ಇಸಿಜಿ ಮಾಡಿಸುವಷ್ಟರಲ್ಲೇ ರಂಗನಾಥ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೃತ ರಂಗನಾಥ್ ಬೆಂಗಳೂರಿನ ಜಯನಗರದ ನಿವಾಸಿ. ಕುಟುಂಬದೊಂದಿದೆ ಪ್ರವಾಸ ಮುಗಿಸಿ ವಾಪಾಸ್ ಆಗಿತ್ತಿದ್ದಾಗಲೇ ಈ ದುರಂತ ಸಂಭವಿಸಿದೆ.
* ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಹೃದಯಾಘಾತಕ್ಕೆ 29 ವರ್ಷದ ಯುವತಿ ಬಲಿಯಾಗಿದ್ದಾರೆ.
ಮೀನಾಕ್ಷಿ (29) ಹೃದಯಾಘಾತದಿಂದ ಸಾವನ್ನಪ್ಪಿದ ಯುವತಿ. ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದ ಮೀನಾಕ್ಷಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಹೋಗಲೆಂದು ಕಾರಿನಲ್ಲಿ ಕುಳಿತವರು ಹೃದಯಾಘಾತದಿಂದ ಕಾರಿನಲ್ಲಿಯೇ ಮೃತಪಟ್ಟಿದ್ದಾರೆ.
* ಮೂಡಿಗೆರೆ ತಾಲೂಕಿನಲ್ಲಿ 29 ವರ್ಷದ ಮಹಿಳೆ ಹಾಗೂ 75 ವರ್ಷದ ವೃದ್ಧ ಇಬ್ಬರೂ ಒಂದೇ ದಿನ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದ ಮೀನಾಕ್ಷಿ (29) ಮೃತ ಮಹಿಳೆ. ಹಾಗೂ ಬಿ.ಹೊಸಳ್ಳಿ ಗ್ರಾಮದ ಸುಮಿತ್ರೇಗೌಡ (75) ಮೃತರು. ಎದೆನೋವು ಕಾಣಿಸಿಕೊಂಡು ಕಾರಿನಲ್ಲಿಯೇ ಮಹಿಳೆ ಮೀನಾಕ್ಷಿ ಸಾವನ್ನಪ್ಪಿದ್ದಾರೆ. ಸುಮಿತ್ರೇಗೌಡ ಹೃದಯಾಘಾತದಿಂದ ಮನೆಯಲ್ಲಿಯೇ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
* ಹಾಸನ: ಹಾಸನ ಜಿಲ್ಲೆಯಲ್ಲಿ ಹಠಾತ್ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಆನಂದ್(44) ಮೃತಪಟ್ಟವರು.
ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದಲ್ಲಿ ಘಟನೆ ನಡೆದಿದೆ. ಐಚನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಆನಂದ್ ಕೊಂಗಲಬೀಡು ಗ್ರಾಮದ ಮನೆಯಲ್ಲಿ ರಾತ್ರಿ ಮಲಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಪತ್ನಿಯ ಬಳಿ ಎದೆ ನೋವು ಎಂದು ಹೇಳಿಕೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಟೋ ಕರೆ ತರುವಷ್ಟರಲ್ಲಿ ಆನಂದ್ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಹಾಸನ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿಂದ ಹೃದಯಘಾತಕ್ಕೆ 37 ಜನ ಸಾವನ್ನಪ್ಪಿದ್ದಾರೆ.