ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮೆಣಸಮಕ್ಕಿ ಗ್ರಾಮದ ನಿವಾಸಿಯಾಗಿರುವ ರೈತ ಲಕ್ಷ್ಮಣ(45) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ನಿನ್ನೆ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಬಂದಿದ್ದಾಗ ಲಕ್ಷ್ಮಣ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಲಕ್ಷ್ಮಣ ಕುಟುಂಬದವರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದರೆ, ಆಂಬುಲೆನ್ಸ್ ಬರುವಷ್ಟರಲ್ಲಿ ರೈತ ಲಕ್ಷ್ಮಣ ಮೃತಪಟ್ಟಿದ್ದಾರೆ. ಇದರೊಂದಿಗೆ ಹಾಸನ ಜಿಲ್ಲೆಯಲ್ಲಿ ಕಳೆದ 46 ದಿನಗಳಲ್ಲಿ 38 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತದ ಸರಣಿ ಸಾವಿನ ಪ್ರಕರಣಗಳಿಂದ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.