BIG NEWS: ಶಾಸಕರ ಮನೆ ಬಳಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಿಡಿಗೇಡಿಗಳ ದಾಳಿ: 12 ಕಾರು, 8 ಆಟೋಗಳ ಗಾಜು ಪುಡಿ ಪುಡಿ

ಬೆಂಗಳೂರು: ಶಾಸಕ ಸತೀಶ್ ರೆಡ್ದಿ ಮನೆಯ ಹಿಂಭಾಗದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿ, ವಾಹನಗಳನ್ನು ಸಂಪೂರ್ಣ ಜಖಂಗೊಳಿಸಿರುವ ಘಟನೆ ಬೆಂಗಳುರಿನ ಬೊಮ್ಮಸಂದ್ರದ ಹೊಂಗಸಂದ್ರದಲ್ಲಿ ನಡೆದಿದೆ.

ಹೊಂಗ ಸಂದ್ರದ ರಾಜಕುಮಾರ್ ರಸ್ತೆ ಬದಿ ನಿಲ್ಲಿಸಿದ್ದ 12 ಕಾರುಗಳು, 8 ಆಟೋ ಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇಂದು ನಸುಕಿನ ಜಾವ ಈ ಘಟನೆ ನಡೆದಿದೆ. ದೊಣ್ಣೆ, ರಾಡ್, ಕಲ್ಲುಗಳಿಂದ ಕಾರು, ಆಟೋಗಳ ಮೇಲೆ ದಾಳಿ ನಡೆಸಿದ್ದಾರೆ.

ಕಾರು ಹಾಗೂ ಆಟೋಗಳ ಗಾಜು ಪುಡಿ ಪುಡಿಯಾಗಿವೆ. ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಘಟನೆ ಸಂಬಂಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಸಿಸಿಟಿವಿ ಕ್ಯಾಮರಾ ಆಧರಿಸಿ ಪೊಲೀಸರು ಅರುಣ್, ಸಾಗರ್, ಸತೀಶ್ ಹಾಗೂ ಮರಿಯಪ್ಪ ಎಂಬ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read