ಹಾಸನ : ‘ಡಿಪೋ ಮ್ಯಾನೇಜರ್’ ಕಿರುಕುಳಕ್ಕೆ ಬೇಸತ್ತು ಕೆಎಸ್ ಆರ್ ಟಿಸಿ ಬಸ್ ಚಾಲಕನೋರ್ವ ಡಿಪೋದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಡಿಪೋ ಮ್ಯಾನೇಜರ್ ಶಾಜಿಯಾ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹರೀಶ್ ಎಂಬುವವರು ಚಾಲಕರ ವಿಶ್ರಾಂತಿ ಕೊಠಡಿಯಲ್ಲಿ ವಿಷ ಸೇವಿಸಿದ್ದಾರೆ.
ಕೆಲಸದ ವಿಚಾರವಾಗಿ ಹರೀಶ್ ಹಾಗೂ ಶಾಜಿಯಾ ನಡುವೆ ವಾಗ್ವಾದ ನಡೆದಿದೆ. ನಂತರ ವಿಶ್ರಾಂತಿ ಕೊಠಡಿಗೆ ಹೋಗಿ ಹರೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ಹರೀಶ್ ಗೆ ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:KSRTC ಬಸ್