HomeLatest NewsBREAKING: ಶಿವಮೊಗ್ಗ: ಹೊಲದಲ್ಲಿ ಕೆಲಸ ಮಾಡುವಾಗ ಕುಸಿದು ಬಿದ್ದ ರೈತ: ಹೃದಯಾಘಾತದಿಂದ ಸಾವು

BREAKING: ಶಿವಮೊಗ್ಗ: ಹೊಲದಲ್ಲಿ ಕೆಲಸ ಮಾಡುವಾಗ ಕುಸಿದು ಬಿದ್ದ ರೈತ: ಹೃದಯಾಘಾತದಿಂದ ಸಾವು

ಶಿವಮೊಗ್ಗ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟಬೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಶಕುನ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕೃಷ್ಣಮೂರ್ತಿ ಶಿಗ್ಗಾದ್ (62) ಮೃತ ರೈತರು. ಹಿರೇಶಕುನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣಮೂರ್ತಿ, ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular