ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದಿನಿಂದ ಮತ್ತೆ ಮೂರು ದಿನಗಳ ಕಾಲ ಕಾಂಗ್ರೆಸ್ ಶಾಸಕರ ಒನ್ ಟು ಒನ್ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಲಿದೆ.
ಕಳೆದ ಬಾರಿ ರಣದೀಪ್ ಸಿಂಗ್ ಸುರ್ಜೇವಾಲ ನಡೆಸಿದ್ದ ಒನ್ ಟು ಒನ್ ಮೀಟಿಂಗ್ ನಲ್ಲಿ ಕಾಂಗ್ರೆಸ್ ನ 34ಕ್ಕೂ ಹೆಚ್ಚು ಶಾಸಕರ ಜೊತೆ ಚರ್ಚಿಸಿದ್ದರು. ಇಂದು 24 ಶಾಸಕರೊಂದಿಗೆ ಸಭೆ ನಡೆಸಲಿದ್ದು, ಕೆಲವೇ ಸಮಯದಲ್ಲಿ ಸಭೆ ಆರಂಭವಾಗಲಿದೆ. ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಶಾಸಕರೊಂದಿಗೆ ಖುದ್ದು ಸುರ್ಜೇವಾಲ ಸಭೆ ನಡೆಸಲಿದ್ದಾರೆ.
ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ವಾಸ್ತವ್ಯ ಹೂಡಲಿರುವ ರಣದೀಪ್ ಸಿಂಗ್ ಸುರ್ಜೇವಾಲ ಕಾಂಗ್ರೆಸ್ ನ ಶಾಸಕರನ್ನು ಖುದ್ದು ಭೇಟಿಯಾಗಿ, ಒನ್ ಟು ಒನ್ ಸಭೆ ನಡೆಸಲಿದ್ದಾರೆ. ಪಕ್ಷದಲ್ಲಿನ ಸಮಸ್ಯೆ, ಕ್ಷೇತ್ರದ ಅಭಿವೃದ್ಧಿ ವಿಚಾರ, ಸರ್ಕಾರದ ಯೋಜನೆಗಳು ಜನರಿಗೆ ತಲುಪುತ್ತಿದೆಯೇ? ಎಂಬ ಬಗ್ಗೆ ಮಾಹಿತಿ ಸಂಗ್ರಹ, ಪಕ್ಷ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.