ಬೆಂಗಳೂರು : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ತಾಯಿಯೇ ಮಗುವನ್ನು ಕೊಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ಒಂದೂವರೆ ತಿಂಗಳ ಮಗುವನ್ನು ತಾಯಿ ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಕೊಂದಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಶೇಷಪುರದ ನಾಗಕಲ್ಲು ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪವನ್ ಹಾಗೂ ರಾಧೆ ಎಂಬ ದಂಪತಿಗೆ ಗಂಡು ಮಗು ಜನಿಸಿತ್ತು. ಆದರೆ ಪವನ್ ಮನೆ ನಿಭಾಯಿಸದೇ ಕುಡಿತದ ಚಟ ಬೆಳೆಸಿಕೊಂಡಿದ್ದನು. ಇದರಿಂದ ಮನೆಯಲ್ಲಿ ಕಡುಬಡತನವಿತ್ತು, ಊಟಕ್ಕೂ ಪರದಾಡುವ ಪರಿಸ್ಥಿತಿ ಇತ್ತು ಎನ್ನಲಾಗಿದೆ. ಇದರಿಂದ ಬೇಸತ್ತ ರಾಧೆ ತಡರಾತ್ರಿ ಮಗುವನ್ನು ನೀರಿನಲ್ಲಿ ಮುಳಗಿಸಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಘಟನೆ ಸಂಬಂಧ ನೆಲಮಂಗಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಸಿದ್ದತೆ ನಡೆಸಿದ್ದಾರೆ.
You Might Also Like
TAGGED:ಹೃದಯವಿದ್ರಾವಕ