ಬೆಂಗಳೂರು : ರಾಜ್ಯ ಸರ್ಕಾರ ಸದ್ಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾದರೆ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ ನೀಡಲಾಗುತ್ತದೆ ಎಂದು ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕೊಪ್ಪಳದ ಯಲಬುರ್ಗಾದಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಅವರು ‘ರಾಜ್ಯ ಸರ್ಕಾರ ಸದ್ಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದೆ, ಹೆಣ್ಣು ಮಕ್ಕಳಿಗೆ 2 ಸಾವಿರ ನೀಡಲಾಗುತ್ತಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾದರೆ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ ನೀಡಲು ಚಿಂತನೆ ನಡೆಸಲಾಗುತ್ತದೆ ಎಂದರು.
ಸರ್ಕಾರದಲ್ಲಿ ಹಣ ಕಡಿಮೆ ಇದೆ ಎಂದು ಯಾರೂ ಹೇಳಿದರು? ನಮ್ಮ ಸರಕಾರದಲ್ಲಿ ಅಭಿವೃದ್ಧಿಗೆ ಹಿನ್ನಡೆ ಆಗಿಲ್ಲಎಂದರು. ಹೆಣ್ಣು ಮಕ್ಕಳಿಗೆ 2000 ಕೊಡುತ್ತೀರಿ, ನಮಗ್ಯಾಕೆ ಇಲ್ಲ ಅಂದರು. ನಮ್ಮ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ. ಅಲ್ಲಿ ನಾನು ತಮಾಷೆಯಾಗಿ ಮಾತಾಡಿದೆ ಎಂದರು.
ನಮ್ಮ ಸರಕಾರದಲ್ಲಿ ಅಭಿವೃದ್ಧಿಗೆ ಹಿನ್ನಡೆ ಆಗಿಲ್ಲ ಇನ್ನು ಮೂರು ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ. ಯಾವುದೇ ಬದಲಾವಣೆ ಇಲ್ಲ ಹಣಕಾಸು ಮಂತ್ರಿ ಆದರೆ ಇನ್ನೂ ಹೆಚ್ಚಿನ ಗ್ಯಾರಂಟಿ ಕೊಡುತ್ತೇವೆ ಎಂದರು.