ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನಲ್ಲಿರುವ ರಾಜಾ ಭೋಜ್ ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಏರ್ ಪೋರ್ಟ್ ಕಚೇರಿಯ ಇ-ಮೇಲ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಏರ್ ಪೋರ್ಟ್ ಗೆ ಆಗಮಿಸಿದ ಪೊಲೀಸರು, ಬಾಂಬ್ ಪತ್ತೆ ಮತ್ತು ಬಾಂಬ್ ನಿಷ್ಕ್ರಿಯ ದಳ ಪರುಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದೆ.