ರಾಯಚೂರು: ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ರಾಯಚೂರು ಜಿಲ್ಲೆಯಲ್ಲಿಯೂ ವ್ಯಕ್ತಿಯೋರ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
36 ವರ್ಷದ ಶರಣಬಸವ ಹೃದಯಾಘಾತದಿಂದ ಮೃತ ಪಟ್ಟವರು. ರಾಯಚೂರಿನ ಪಗಡದಿನ್ನಿ ಕ್ಯಾಂಪ್ ನಿವಾಸಿ. ಎದೆನೋವು ಕಾಣಿಸಿಕೊಂಡು ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.