ಮಂಗಳೂರು: ಪ್ರಿಯತಮೆಗೆ ಚಾಕುವಿನಿಂದ ಇರಿದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಡ್ಮಾಣ್ ಗ್ರಾಮದಲ್ಲಿ ನಡೆದಿದೆ.
ಶ್ರೀಧರ್ (30) ಆತ್ಮಹತ್ಯೆಗೆ ಶರಣಾಗಿರುವ ಯುವಕ. ದಿವ್ಯಾ ಯಾನೆ ಎಂಬ ಯುವತಿಗೆ ಚಾಕುವಿನಿಂದ ಇರಿದು ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಶ್ರೀಧರ್ ಹಾಗೂ ದಿವ್ಯಾ ಯಾನೆ ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲ ತಿಂಗಳ ಹಿಂದೆ ಇಬ್ಬರ ನಡುವೆ ಮನಸ್ತಾಪವಾಗಿತ್ತು. ಇಂದು ದುವ್ಯಾಳ ಮನೆಗೆ ಬಂದು ತನ್ನನ್ನು ಮದುವೆಯಾಗುವಂತೆ ಪೀಡಿಸಿದ್ದ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಸಿಟ್ಟಿಗೆದ್ದು ದಿವ್ಯಾಳಿಗೆ ಚಾಕುವಿನಿಂದ ಇರಿದಿದ್ದಾನೆ.
ತಪ್ಪಿಸಿಕೊಂಡು ಹೋಗುವಾಗ ದಿವ್ಯಾ ಮೂರ್ಛೆ ತಪ್ಪಿ ಬಿದ್ದಿದ್ದಳು. ದಿವ್ಯಾ ಮೃತಪಟ್ಟಿದ್ದಾಳೆ ಎಂದು ಹೆದರಿ ಆಕೆಯ ಮನೆಯಲ್ಲಿಯೇ ಶ್ರೀಧರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಗಾಯಾಳು ದಿವ್ಯಾಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.