HomeLatest NewsBIG NEWS: ದೇಶದಲ್ಲೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಬಳಸಿ ಜನರಿಂದಲೇ ಜನಗಣತಿ

BIG NEWS: ದೇಶದಲ್ಲೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಬಳಸಿ ಜನರಿಂದಲೇ ಜನಗಣತಿ

ನವದೆಹಲಿ: ಕೇಂದ್ರ ಸರ್ಕಾರ ಜನಗಣತಿ ನಡೆಸಲು ಮುಂದಾಗಿದ್ದು, ಜನರಿಂದಲೇ ದತ್ತಾಂಶ ದಾಖಲಿಸಲು ಪೋರ್ಟಲ್ ಸಿದ್ದಪಡಿಸಲಾಗುತ್ತಿದೆ.

ದೇಶದಲ್ಲಿ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಬಳಸಿ ಡಿಜಿಟಲ್ ಗಣತಿ ಪ್ರಕ್ರಿಯೆ ನಡೆಸಲಾಗುವುದು. ಇಂಗ್ಲಿಷ್, ಹಿಂದಿ, ಪ್ರಾದೇಶಿಕ ಭಾಷೆಗಳಲ್ಲಿ ಮೊಬೈಲ್ ಆ್ಯಪ್ ರಚಿಸಲಾಗುವುದು.

ಕೇಂದ್ರ ಸರ್ಕಾರ ನಡೆಸಲಿರುವ ಜನಗಣತಿಗೆ ನಾಗರೀಕರು ಸ್ವಯಂ ದತ್ತಾಂಶ ದಾಖಲಿಸುವ ಸೌಕರ್ಯವನ್ನು ಕಲ್ಪಿಸಲು ಪೋರ್ಟಲ್ ಸಿದ್ದಪಡಿಸಲಾಗುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯಲಿದೆ. ಗಣತಿದಾರರು ನಾಗರೀಕರ ಮಾಹಿತಿಗಳನ್ನು ಮೊಬೈಲ್ ಅಪ್ಲಿಕೇಶನ್ ಗಳ ಮೂಲಕ ದಾಖಲಿಸಲಿದ್ದಾರೆ. ಮನೆಗಳ ಪಟ್ಟಿ, ಮನೆಗಳ ಗಣತಿ, ಜನಗಣತಿಯ ಸಂದರ್ಭದಲ್ಲಿ ಈ ಅವಕಾಶವನ್ನು ನಾಗರೀಕರಿಗೆ ಕಲ್ಪಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದತ್ತಾಂಶ ಸಂಗ್ರಹ, ವರ್ಗಾವಣೆ, ಶೇಖರಣೆ ಸಂದರ್ಭದಲ್ಲಿ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular