HomeLatest NewsBIG NEWS: ಕೇಂದ್ರದ ನೀತಿ ವಿರೋಧಿಸಿ ನಾಳೆ ‘ಭಾರತ ಬಂದ್’: ದೇಶಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕಾರ್ಮಿಕ...

BIG NEWS: ಕೇಂದ್ರದ ನೀತಿ ವಿರೋಧಿಸಿ ನಾಳೆ ‘ಭಾರತ ಬಂದ್’: ದೇಶಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳ ಕರೆ

ನವದೆಹಲಿ: ಕಾರ್ಮಿಕ ಸಂಘಟನೆಗಳಿಂದ ನಾಳೆ ಅಖಂಡ ಭಾರತ ಬಂದ್ ಗೆ ಕರೆ ನೀಡಲಾಗಿದೆ. 10ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ.

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿ ನೀತಿ, ಕಾರ್ಪೊರೇಟ್ ಪರವಾದ ನಿಲುವನ್ನು ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ. 25 ಕೋಟಿಗೂ ಹೆಚ್ಚು ಕಾರ್ಮಿಕರು ನಾಳಿನ ಬಂದ್ ಗೆ ಬೆಂಬಲ ನೀಡಿದ್ದಾರೆ. ಬ್ಯಾಂಕ್, ವಿಮೆ, ಅಂಚೆ ನೌಕರರು ಕೂಡ ಬಂದ್ ಗೆ ಬೆಂಬಲ ನೀಡಲಿದ್ದು, ಕರ್ನಾಟಕಕ್ಕೂ ನಾಳೆ ಬಂದ್ ಬಿಸಿ ತಟ್ಟಲಿದೆ ಎನ್ನಲಾಗಿದೆ.

ಸರ್ಕಾರಿ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ ಕಾರ್ಮಿಕ ಸಂಘಗಳು ಜುಲೈ 9 ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದು, 25 ಕೋಟಿಗೂ ಹೆಚ್ಚು ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಹೆದ್ದಾರಿ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ತೊಡಗಿರುವ 25 ಕೋಟಿಗೂ ಹೆಚ್ಚು ಕಾರ್ಮಿಕರು ಬುಧವಾರ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ ನಡೆಸುವ ನಿರೀಕ್ಷೆಯಿದೆ. ಇದು ದೇಶಾದ್ಯಂತ ಸೇವೆಗಳಿಗೆ ಅಡಚಣೆಯುಂಟು ಮಾಡಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular