HomeLatest Newsಇನ್ನು ಶಿಕ್ಷಕರ ಆನ್ಲೈನ್ ಹಾಜರಿಗೆ 'ಪ್ರತ್ಯಕ್ಷ' ಆರಂಭ: ಶಾಲಾ ಮಕ್ಕಳ ಫೇಸ್ ರೀಡಿಂಗ್ ಹಾಜರಿಗೂ ಶೀಘ್ರ...

ಇನ್ನು ಶಿಕ್ಷಕರ ಆನ್ಲೈನ್ ಹಾಜರಿಗೆ ‘ಪ್ರತ್ಯಕ್ಷ’ ಆರಂಭ: ಶಾಲಾ ಮಕ್ಕಳ ಫೇಸ್ ರೀಡಿಂಗ್ ಹಾಜರಿಗೂ ಶೀಘ್ರ ಚಾಲನೆ

ಗದಗ: ಮುಂದಿನ ಒಂದು ತಿಂಗಳೊಳಗೆ ಶಾಲಾ ಮಕ್ಕಳ ಫೇಸ್ ರೀಡಿಂಗ್ ಹಾಜರಿ ಪ್ರಕ್ರಿಯೆಗೆ ರಾಜ್ಯದಲ್ಲಿ ಚಾಲನೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.

ಶಿಕ್ಷಕರ ಫೇಸ್ ರೇಡಿಂಗ್ ಆನ್ಲೈನ್ ಹಾಜರಿ ‘ಪ್ರತ್ಯಕ್ಷ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವರು ಮಾತನಾಡಿ, ಸರ್ಕಾರಿ ಶಾಲೆ ಶಿಕ್ಷಕರ ಆನ್ಲೈನ್ ಹಾಜರಿ ಅಗತ್ಯವಿದ್ದು, ಇದೇ ಪ್ರಕ್ರಿಯೆಯನ್ನು ರಾಜ್ಯಾದ್ಯಂತ ಕೈಗೊಳ್ಳಲು ಹಿರಿಯ ಸಚಿವರದ ಹೆಚ್.ಕೆ. ಪಾಟೀಲ್ ಅವರ ಸಹಕಾರ ಅಗತ್ಯವಿದೆ ಎಂದು ಹೇಳಿದ್ದಾರೆ.

ಶಿಕ್ಷಕರ ಫೇಸ್ ರೇಡಿಂಗ್ ಹಾಜರಿ ಪ್ರಕ್ರಿಯೆ ರೀತಿಯಲ್ಲಿ ರಾಜ್ಯದಲ್ಲಿರುವ 57 ಶಾಲಾ ಮಕ್ಕಳ ಫೇಸ್ ರೀಡಿಂಗ್ ಹಾಜರಿಗೆ ಇನ್ನೊಂದು ತಿಂಗಳೊಳಗೆ ಅಧಿಕೃತ ಚಾಲನೆ ನೀಡಲು ಸರ್ಕಾರ ಸಿದ್ಧತೆ ಕೈಗೊಂಡಿದೆ. ತಂತ್ರಜ್ಞಾನ ಬಳಕೆ ಮಾಡಿಕೊಂಡು ರಾಜ್ಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಕ್ರಮ ವಹಿಸಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನ್ನ ಅಧ್ಯಕ್ಷತೆಯಲ್ಲಿ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ “ಶಿಕ್ಷಣ ಇಲಾಖೆಯ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ” ನಡೆಸಲಾಯಿತು.

ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಗದಗ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಆನ್ಲೈನ್ ಹಾಜರಾತಿ ವ್ಯವಸ್ಥೆ  ಪ್ರತ್ಯಕ್ಷ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular