ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಕರ ವರ್ಗಾವಣೆಗೆ ಶೀಘ್ರದಲ್ಲೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.
ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳಿಂದ ಶಿಕ್ಷಕರ ವೇಳಾಪಟ್ಟಿಯನ್ನು ಪರಿಷ್ಕರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು.
ಶಿಕ್ಷಕರ ವೇಳಾಪಟ್ಟಿಯನ್ನು ಜೂನ್ ನಲ್ಲಿಯೇ ಬಿಡುಗಡೆ ಮಾಡಲಾಗಿತ್ತು. ಅದರಂತೆ ಶಿಕ್ಷಕರು ವರ್ಗಾವಣೆಗೆ ಅರ್ಜಿ ಸಲ್ಲಿಸುವುದು, ಹೆಚ್ಚುವರಿ ಶಿಕ್ಷಕರನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿತ್ತು, ಆದರೆ ಕೆಲವು ಆಡಳಿತಾತ್ಮಕ ಮತ್ತು ತಾಂತ್ರಿಕ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಜೂನ್ ನಲ್ಲಿ ಹೊರಡಿಸಿದ್ದ ವೇಳಾಪಟ್ಟಿಗೆ ತಡೆ ನೀಡಿದೆ. ಪರಿಷ್ಕೃತ ವೇಳಾಪಟ್ಟಿ ಸಿದ್ಧಪಡಿಸಿ ಶೀಘ್ರದಲ್ಲೇ ಬಿಡುಗಡೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.