ದಾವಣಗೆರೆ: ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ ಮೃತಪಟ್ಟವರು.
ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅಕ್ಷಯ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ದಾವಣಗೆರೆಯ ಜಯನಗರ ನಿವಾಸಿ ಅಕ್ಷಯ್ ಸಾವಿನೊಂದಿಗೆ ದಾವಣಗೆರೆ ಮೂರು ತಿಂಗಳಲ್ಲಿ 75 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.