ಬೆಳಗಾವಿ: ಸರ್ಕಾರಿ ಮತ್ತು ಅನುದಾನಿತ ಶಾಲಾ, ಕಾಲೇಜುಗಳಿಗೆ 20,000 ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಸರ್ಕಾರಿ ಪಿಯು ಕಾಲೇಜಿನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಒಳ ಮೀಸಲಾತಿ ಸಂಬಂಧ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ ನೀರಿಕ್ಷೆಯಲ್ಲಿದ್ದೇವೆ. ವರದಿ ಬಂದ ತಕ್ಷಣ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.
46 ಸಾವಿರ ಶಾಲೆಗಳ ಪೈಕಿ 57 ಲಕ್ಷ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ನೀಡಲಾಗುತ್ತಿದೆ. 25000 ಬಡ ಮಕ್ಕಳಿಗೆ ನೀಟ್, ಸಿಇಟಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯ ಸರ್ಕಾರದಿಂದ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.