HomeLatest NewsBIG NEWS: ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳಿಂದ ಈ ವರ್ಷ 10,000 ಹೆಚ್ಚುವರಿ ಶಿಕ್ಷಕರ ವರ್ಗಾವಣೆ

BIG NEWS: ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳಿಂದ ಈ ವರ್ಷ 10,000 ಹೆಚ್ಚುವರಿ ಶಿಕ್ಷಕರ ವರ್ಗಾವಣೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳಿಂದ ಹೆಚ್ಚುವರಿಯಾಗಿ ಈ ವರ್ಷ 10,000 ಶಿಕ್ಷಕರನ್ನು ವರ್ಗಾವಣೆಗೆ ಗುರುತಿಸಲಾಗಿದೆ. ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಈ ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಮಾಡಲಿದ್ದು, ಶಿಕ್ಷಕರ ಕೊರತೆಗೆ ಪರಿಹಾರ ಸಿಗಲಿದೆ.

ಪ್ರಾಥಮಿಕ ಶಾಲೆಗಳಲ್ಲಿ ಪ್ರತಿ 30 ವಿದ್ಯಾರ್ಥಿಗಳಿಗೆ ಒಬ್ಬರಂತೆ, ಪ್ರೌಢಶಾಲೆಗಳಲ್ಲಿ ಪ್ರತಿ 35 ವಿದ್ಯಾರ್ಥಿಗಳಿಗೆ ಒಬ್ಬರಂತೆ ಶಿಕ್ಷಕರ ಮಾನದಂಡದಡಿ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಲಾಗಿದೆ.

ಹೀಗೆ ಹೆಚ್ಚುವರಿಯಾಗಿ ಗುರುತಿಸಲಾದ ಶೇಕಡ 90ರಷ್ಟು ಶಿಕ್ಷಕರಿಗೆ ಆಯಾ ತಾಲೂಕಿನೊಳಗೆ ವರ್ಗಾವಣೆ ಸಿಗಲಿದೆ. ಶೇಕಡ 5ರಷ್ಟು ಶಿಕ್ಷಕರು ತಾಲೂಕಿನ ಹೊರಗೆ ಹಾಗೂ ಜಿಲ್ಲೆಯ ಒಳಗೆ ಮತ್ತು ಶೇಕಡ 5ರಷ್ಟು ಶಿಕ್ಷಕರಿಗೆ ಜಿಲ್ಲೆಯ ಹೊರಗೆ ಸ್ಥಳ ನಿಯುಕ್ತಿ ಮಾಡಲಾಗುವುದು. ಶಿಕ್ಷಕರ ವರ್ಗಾವಣೆಗಾಗಿ ಕೌನ್ಸೆಲಿಂಗ್ ನಡೆಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ವರ್ಷ ಶಿಕ್ಷಣ ಇಲಾಖೆಯಿಂದ ಶಿಕ್ಷಕರ ವರ್ಗಾವಣೆ ನಡೆಸಲಾಗುವುದು. ಒಂದು ಬಾರಿ ಹೆಚ್ಚುವರಿ, ಮತ್ತೊಂದು ಬಾರಿ ಕಡ್ಡಾಯ ವರ್ಗಾವಣೆ ನಡೆಸಲಿದ್ದು, ಅಂತೆಯೇ ಈ ವರ್ಷ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. 63,900 ಅರ್ಜಿಗಳು ಸಾಮಾನ್ಯ ವರ್ಗಾವಣೆಗೆ ಸಲ್ಲಿಕೆಯಾಗಿವೆ. ಈ ತಿಂಗಳಲ್ಲೇ ಕೌನ್ಸೆಲಿಂಗ್ ನಡೆಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular