ಬೆಂಗಳೂರು: ‘ಡೆವಿಲ್’ ಚಿತ್ರದ ಚಿತ್ರೀಕರಣಕ್ಕಾಗಿ ಜುಲೈ 11 ರಿಂದ 30ರವರೆಗೆ ಥಾಯ್ಲೆಂಡ್ ಗೆ ಹೋಗಲು ನಟ ದರ್ಶನ್ ಅವರಿಗೆ ಕೋರ್ಟ್ ಅನುಮತಿ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಅವರಿಗೆ ಥಾಯ್ಲೆಂಡ್ ಗೆ ಹೋಗಲು ಅನುಮತಿ ನೀಡಿ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.
ಚಿತ್ರಿಕರಣಕ್ಕಾಗಿ ಥಾಯ್ಲೆಂಡ್ ಗೆ ಹೋಗಲು ಅನುಮತಿ ನೀಡುವಂತೆ ಕೋರಿ ದರ್ಶನ್ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್ ಈ ಆದೇಶ ನೀಡಿದೆ. ಡೆವಿಲ್ ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್ ಜುಲೈ 11 ರಿಂದ 30ರವರೆಗೆ ಥಾಯ್ಲೆಂಡ್ ಗೆ ಹೋಗಬಹುದು. ವಿದೇಶದಿಂದ ಭಾರತಕ್ಕೆ ಮರಳಿದ ನಂತರ ಯಾವ ದೇಶಕ್ಕೆ ಯಾವಾಗ ಹೋಗಲಾಯಿತು? ಯಾವಾಗ ವಾಪಸ್ ಬರಲಾಯಿತು? ಎಷ್ಟು ದಿನ ವಿದೇಶದಲ್ಲಿ ಇದ್ದರು? ಅಲ್ಲಿ ನಡೆಸಲಾದ ಕಾರ್ಯ ಚಟುವಟಿಕೆ, ಮತ್ತಿತರ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸುವಂತೆ ಷರತ್ತು ವಿಧಿಸಲಾಗಿದೆ.