ಬೆಂಗಳೂರು: ನಟ ದರ್ಶನ್ ಗ್ಯಾಂಗ್ ರೀತಿಯಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿ ಹೇಮಂತ್ ನನ್ನು ಸೋಲದೇವನಹಳ್ಳಿ ಠಾಣೆ ಪೋಲೀಸರು ಬಂಧಿಸಿದ್ದಾರೆ.
24 ವರ್ಷದ ಹೇಮಂತ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಯುವಕನನ್ನು ಕಿಡ್ನಾಪ್ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ ದಾಖಲಿಸಿಕೊಂಡಿದ್ದ ಸೋಲದೇವನಹಳ್ಳಿ ಠಾಣೆ ಪೊಲೀಸರು ಆರೋಪಿ ಹೇಮಂತ್ ನನ್ನು ಬಂಧಿಸಿದ್ದಾರೆ.
ಕುಶಾಲ್ ಅಪಹರಣ ಮಾಡಿ ಬೆತ್ತಲೆಗೊಳಿಸಿದ್ದ ಗ್ಯಾಂಗ್ ಹಲ್ಲೆ ನಡೆಸಿ ವಿಡಿಯೋ ಮಾಡಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಹೇಮಂತ್ ಪರಾರಿಯಾಗಿದ್ದ. ತುಮಕೂರಿನಲ್ಲಿ ಪರಾರಿಯಾಗುತ್ತಿದ್ದ ವೇಳೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಹೇಮಂತನ ವಿರುದ್ಧ 3-4 ಪ್ರಕರಣಗಳು ಇವೆ ಎನ್ನಲಾಗಿದೆ.