HomeLatest NewsBIG NEWS: ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

BIG NEWS: ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲಿ ಯೆಲ್ಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಕೋಲಾರ, ತುಮಕೂರು, ವಿಜಯನಗರ, ಮಂಡ್ಯ, ರಾಮನಗರದ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular