ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿ ವಿರೋಧಿಸಿ ಇಂದು ದೇಶಾದ್ಯಂತ ಬ್ಯಾಂಕ್, ಕಾರ್ಮಿಕ ಸಂಘಟನೆಗಳಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿವಿಧ ಬ್ಯಾಂಕುಗಳ ನೌಕರರು ಮತ್ತು ಸಿಬ್ಬಂದಿ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದೆ.
ದೇಶಾದ್ಯಂತ ಬ್ಯಾಂಕ್ ನೌಕರರು ಸೇರಿದಂತೆ ಕಾರ್ಮಿಕ ಸಂಘಟನೆಗಳು, ರೈತರು, ಭಾರತ್ ಬಂದ್ ಗೆ ಕರೆ ನೀಡಿ ಮುಷ್ಕರ ಕೈಗೊಂಡಿವೆ. ಇದರಿಂದಾಗಿ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಆರೋಗ್ಯ, ರೈಲ್ವೆ ಸೇರಿದಂತೆ ತುರ್ತು ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ಅಂಚೆ, ಬ್ಯಾಂಕ್ ಸೇರಿ ಇತರೆ ಸೇವೆಗಳಲ್ಲಿ ವ್ಯತ್ಯಯವಾಗಲಿದ್ದು, ಡಿಜಿಟಲ್ ಬ್ಯಾಂಕಿಂಗ್ ಸೇವೆ ಎಂದಿನಂತೆ ಇರಲಿದೆ.