ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಪಟ್ಟಣದ ಶಿವ ಮಂದಿರ ಸಮೀಪ ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮುಖ್ಯ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಅರಸಳು ನಿವಾಸಿ ಟಿ. ಮಂಜಯ್ಯ(59) ಮೃತಪಟ್ಟವರು. ಮನೆಗೆ ಸಂಜೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಮತ್ತೊಂದು ಬೈಕ್ ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಶಿಕ್ಷಕ ಮಂಜಯ್ಯ ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.