ಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗೂಡ್ಸ್ ವಾಹನ ಚಾಲಕರೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.
ಅಶೋಕ್ ಜೀರಿಗವಾಡ (48) ಮೃತ ದುರ್ದೈವಿ. ಮೃತ ಅಶೋಕ್ ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ. ಎಪಿಎಂಸಿ ಮಾರುಕಟ್ಟೆಗೆ ಹೆಸರು ಕಾಳು ತಂದಿದ್ದರು. ಈ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ.
ಎದೆನೋವಿನಿಂದ ಸ್ಥಳದಲ್ಲೇ ಕುಸಿದು ಬಿದ್ದ ಅಶೋಕ್ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.